ಕರ್ನಾಟಕ

karnataka

ETV Bharat / state

ಕರ್ನಾಟಕದಲ್ಲಿ ನಡೆಯಲಿದೆ ಖೇಲೋ ಇಂಡಿಯಾ ಕ್ರೀಡಾಕೂಟ: ಪ್ರಧಾನಿ ಒಪ್ಪಿಗೆ

ಮುಂಬರುವ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜಿಸಲು ಪ್ರಧಾನಮಂತ್ರಿ ಮೋದಿ ಅವರಿಂದ ಒಪ್ಪಿಗೆ ದೊರೆತಿದೆ ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.

Khelo India
ಖೇಲೋ ಇಂಡಿಯಾ ಕ್ರೀಡಾಕೂಟ

By

Published : Mar 2, 2021, 9:04 AM IST

ವಿಜಯಪುರ:ಮುಂಬರುವ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜಿಸಲು ಪ್ರಧಾನಮಂತ್ರಿ ಮೋದಿ ಅವರಿಂದ ಒಪ್ಪಿಗೆ ದೊರೆತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಹೇಳಿದರು.

ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಿಂಥೆಟಿಕ್, ಅಥ್ಲೆಟಿಕ್ ಟ್ರ್ಯಾಕ್ ವಾಲಿಬಾಲ್ ಮೈದಾನಗಳ ಹಾಗೂ ಒಳಾಂಗಣ ಈಜುಕೊಳ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಖೇಲೋ ಇಂಡಿಯಾ ಕ್ರೀಡಾಕೂಟ ಆಯೋಜಿಸುವ ಕುರಿತು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಈ ಕ್ರೀಡಾಕೂಟ ಕರ್ನಾಟಕದಲ್ಲಿ ಹಮ್ಮಿಕೊಳ್ಳಲು ಪ್ರಧಾನಿ ಒಪ್ಪಿಗೆ ನೀಡಿದ್ದು, ಕೇಂದ್ರದ ಕ್ರೀಡಾ ತಜ್ಞರು ಕೂಡ ಕ್ರೀಡಾಕೂಟಕ್ಕಾಗಿ ರಾಜ್ಯದ ಆರು ಸ್ಥಳಗಳನ್ನು ಗುರುತಿಸಿದ್ದಾರೆಂದು ಹೇಳಿದರು.

ಕ್ರೀಡಾಪಟುಗಳನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸುವ ಅಗತ್ಯವಿದೆ. ರಾಜ್ಯದ 2 ಕೋಟಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಅವರಲ್ಲಿ ಶಕ್ತಿ ತುಂಬುವ ಕಾರ್ಯ ನಡೆಯಬೇಕಾಗಿದ್ದು, ಕ್ರೀಡಾಕ್ಷೇತ್ರದಲ್ಲಿ ಸಮಸ್ಯೆಗಳು ಮತ್ತು ಅವಶ್ಯಕತೆಗಳನ್ನು ತಿಳಿಯಲು ತಾವು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಮುಂದಿನ ಆಯವ್ಯಯದಲ್ಲಿ ಅನುದಾನ ಒದಗಿಸುವ ಬಗ್ಗೆ ಸಮಗ್ರ ಅಧ್ಯಯನ ವರದಿ ಸಿದ್ಧಪಡಿಸಲು ತಾವು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಪಟುಗಳಲ್ಲಿ ಶಕ್ತಿ ತುಂಬುವ ಕಾರ್ಯ ನಡೆಯಬೇಕಾಗಿದೆ. ಕ್ರೀಡಾಪಟುಗಳ ಮೂಲಕ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದ ಅವರು, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸುವ ಜೊತೆಗೆ ಕ್ರೀಡಾಕ್ಷೇತ್ರದಲ್ಲಿರುವ ವಿವಿಧ ಸಬ್ಸಿಡಿ, ಉದ್ಯೋಗ ಇತರ ಸಮಸ್ಯೆ ಪರಿಹರಿಸುವ ಅಗತ್ಯವಿದ್ದು, ಕ್ರೀಡಾ ಕ್ಷೇತ್ರವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ತಾವು ಪ್ರಯತ್ನಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ತರಬೇತಿ ನೀಡುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವರಿಗೆ ಅವಕಾಶ ಒದಗಿಸಬೇಕು ಎಂದು ಹೇಳಿದರು.

ABOUT THE AUTHOR

...view details