ವಿಜಯಪುರ:ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಜಿಲ್ಲೆಯ ಬಸಲಿಂಗಪ್ಪ ವೀರಸಂಗಪ್ಪ ದೇಶಮುಖ ಕುಟುಂಬಸ್ಥರಿಗೆ ಜಿಲ್ಲಾಡಳಿತ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಬೇಕು ಎಂದು ಕಿತ್ತೂರು ರಾಣಿ ಚೆನ್ನಮ್ಮ ವಿಶ್ವ ಲಿಂಗಾಯತ ಪಂಚಮಸಾಲಿ ಸೇವಾ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕುಟುಂಬಸ್ಥರ ಸನ್ಮಾನಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ... - Kittur Rani Chennamma Seva Panel appeals to DC to pay tribute to the family of those who died for freedom
ಸ್ವಾತಂತ್ರ್ಯಕ್ಕಾಗಿ ಮಡಿದವರ ಕುಟುಂಬಸ್ಥರನ್ನು ಸನ್ಮಾನಿ ಗೌರವಿಸಬೇಕೆಂದು ಕಿತ್ತೂರು ರಾಣಿ ಚೆನ್ನಮ್ಮ ವಿಶ್ವ ಲಿಂಗಾಯತ ಪಂಚಮಸಾಲಿ ಸೇವಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಮನವಿ
ಸ್ವಾತಂತ್ರ್ಯಕ್ಕಾಗಿ ಮಡಿದವರ ಕುಟುಂಬಸ್ಥರ ಸನ್ಮಾನಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಜಂಬಗಿ ಹಾಗೂ ಕೊಟ್ನಾಳ ಹುತಾತ್ಮ ಯೋಧರಾದ ಬಸವಲಿಂಗ ವೀರಸಂಗಪ್ಪ ದೇಶಮುಖ ಅವರು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣ ನೀಡಿದ್ದಾರೆ. ಆದರೆ ಇದುವರಿಗೂ ಸರ್ಕಾರ ಅವರ ವಂಶಸ್ಥರನ್ನು ಗುರುತಿಸುವ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಜನವರಿ 26 ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹುತಾತ್ಮ ವೀರರ ಕುಟುಂಬಸ್ಥರನ್ನ ಗುರುತಿಸಿ ಸನ್ಮಾನಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವ ಲಿಂಗಾಯತ ಪಂಚಮಸಾಲಿ ಸೇವಾ ಸಮಿತಿಯಿಂದ ಮನವಿ ಸಲ್ಲಿಸಿದರು.
TAGGED:
Vijayapura latest news