ವಿಜಯಪುರ:ಜಿಲ್ಲೆಯ ಆಲಮೇಲದ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು: ಕಾರ್ಖಾನೆ ವಿರುದ್ದ ಪ್ರತಿಭಟನೆ - ವಿಜಯಪುರ ಲೇಟೆಸ್ಟ್ ಸುದ್ದಿ
ಆಲಮೇಲ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಆತನ ಕುಟುಂಬಸ್ಥರು ಕಾರ್ಖಾನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆಲಮೇಲ ಪಟ್ಟಣದ ಸುರೇಶ ಪೂಜಾರಿ ಎಂಬ ಕಾರ್ಮಿಕ ದಿನಗೂಲಿ ಮೇಲೆ ಕೆಪಿಆರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕಾಲು ಜಾರಿ ಬಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಯುವಕನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆತನ ಕುಟುಂಬ ವರ್ಗದವರ ಜತೆ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭಾರಿ ಮಳೆ ಸುರಿದರೂ ಅದನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಭೇಟಿ ನೀಡಿ ಪ್ರತಿಭಟನೆ ಹಿಂದಕ್ಕೆ ಪಡೆಯಬೇಕೆಂದು ಮನವಿ ಮಾಡಿದರೂ, ಅದಕ್ಕೆ ಸ್ಪಂದಿಸದ ಪ್ರತಿಭಟನಾಕಾರರು ಸ್ಥಳಕ್ಕೆ ತಹಸೀಲ್ದಾರ್, ಕೆಪಿಆರ್ ಆಡಳಿತ ಮಂಡಳಿ ಅಧಿಕಾರಿಗಳು ಬರುವವರೆಗೆ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದಾರೆ.