ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ - ವಿಜಯಪುರದಲ್ಲಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

Labors Union protest at Vijayapur
ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು

By

Published : Nov 26, 2020, 3:58 PM IST

ವಿಜಯಪುರ: ವೇತನ‌ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ನಗರದಲ್ಲಿ‌ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸಿದ್ದೇಶ್ವರ ಮಂದಿರದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಡಿಸಿ ಕಚೇರಿಗೆ ತಲುಪಿತು. ಕೊರೊನಾ ಕಾರಣದಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಸರ್ಕಾರ ಹೊರಗುತ್ತಿಗೆ ಆಧಾರದಲ್ಲಿ ದುಡಿಯುವ ಕಾರ್ಮಿಕರಿಗೆ ನಿಗದಿತ ಸಮಯದಲ್ಲಿ ವೇತನ ಪಾವತಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರು, ವಸತಿ ಶಾಲೆ ಹಾಗೂ ಹಾಸ್ಟೆಲ್​ಗಳಲ್ಲಿ‌ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳಲಾಗ್ತಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು

ಇದನ್ನೂ ಓದಿ : ವಿಜಯಪುರ: ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆ

ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಲು ಸರ್ಕಾರ ಮುಂದಾಗಬೇಕು. ವೇತನ ಪಾವತಿ, ಮುಂಬಡ್ತಿ, ಜೀವ ವಿಮೆ, ಖಾಯಂ ನೌಕರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details