ವಿಜಯಪುರ: ಕೇಂದ್ರ ಸರ್ಕಾರ ಕೊರೊನಾ ವೈರಸ್ ನಿಯಂತ್ರಣದಲ್ಲಿ ಎಡವಿದೆ ಎಂದು ಆರೋಪಿಸಿ ಜಂಟಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಎಡವಿದೆ: ಜಂಟಿ ಕಾರ್ಮಿಕ ಸಂಘಟನೆಯಿಂದ ಆರೋಪ
ಲಾಕ್ಡೌನ್ ಪರಿಣಾಮ ಅನೇಕ ಕಾರ್ಮಿಕರು ಕಂಪನಿಗಳಲ್ಲಿ ಉದ್ಯೋಗ ಕಳೆದುಕೊಂಡಿದ್ದು ಪರದಾಡುತ್ತಿದ್ದಾರೆ. ಅವರಿಗೆ ಸರ್ಕಾರ ಮಾಸಿಕವಾಗಿ 7,500 ರೂ. ನಗದು ನೀಡಬೇಕೆಂದು ವಿಜಯಪುರ ಜಂಟಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಳೆದ ಒಂದು ತಿಂಗಳಿಂದ ದೇಶದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು ಜನರು ತಮ್ಮ ದುಡಿಮೆ ಕಳೆದುಕೊಳ್ಳುವಂತಾಗಿದೆ. ಅಲ್ಲದೆ ಲಾಕ್ಡೌನ್ ಪರಿಣಾಮ ಅನೇಕ ಕಾರ್ಮಿಕರು ಕಂಪನಿಗಳಲ್ಲಿ ಉದ್ಯೋಗ ಕಳೆದುಕೊಂಡ ಪರಿಣಾಮ ಇಂದು ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಪರದಾಟ ನಡೆಸುತ್ತಿದ್ದಾರೆ. ಅವರಿಗೆ ಸರ್ಕಾರ ಮಾಸಿಕವಾಗಿ 7,500 ರೂ. ನೆರವು ನೀಡಬೇಕೆಂದು ಒತ್ತಾಯಿಸಿದರು.
ಅಲ್ಲದೇ ಕೊರೊನಾ ಫ್ರಂಟ್ ಲೈನ್ನಲ್ಲಿರುವ ವಾರಿಯರ್ಸ್ ಅನ್ನ ಕೇಂದ್ರ ಸರ್ಕಾರ ಖಾಯಂಗೊಳಿಸಬೇಕು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳಿಗೆ ವಿಸ್ತರಿಸುವಂತೆ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.