ವಿಜಯಪುರ :ಲಾರಿ ಹರಿದು ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮೃತ ಕಾರ್ಮಿಕ ಮಹಿಳೆಯನ್ನ ಲಕ್ಷ್ಮಿ ಬಿರಾದಾರ್ (45) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಮೂಲತ: ನಿಡಗುಂದಿ ತಾಲೂಕಿನ ಮುದ್ದಾಪೂರ ಗ್ರಾಮದವಳು ಎಂದು ಗುರುತಿಸಲಾಗಿದೆ. ಹೆದ್ದಾರಿಯ ಎಡಬದಿ ರಸ್ತೆ ದುರಸ್ತಿ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.