ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾ. ಹು. ಬಿಜಾಪುರ(88) 2ರಂದು ತಡರಾತ್ರಿ ರಾತ್ರಿ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಜಾನಪದ ಸಾಹಿತಿ ಕಾಸೀಮಸಾಬ ಹುಸೇನಸಾಬ ಬಿಜಾಪುರ ಅಗಲಿಕೆಯಿಂದ ಜಾನಪದ ಸಾಹಿತ್ಯ ಕ್ಷೇತ್ರ ಬಡವಾಗಿದೆ.
ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರು ವಾಸಿಯಾಗಿದ್ದರು. 1935 ಫೆಬ್ರವರಿ 4ರಂದು ಜನಿಸಿದ್ದ ಕಾಹು ಬಿಜಾಪುರ ಅವರ ಅಂತ್ಯಕ್ರಿಯೆ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 2ಗಂಟೆಗೆ ನೆರವೇರಲಿದೆ. 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು.