ವಿಜಯಪುರ:ಆಲಮಟ್ಟಿ ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ಪ ಮಂಜಿನಾಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯಪುರ ಲೋಕಾಯುಕ್ತ ಎಸ್ಪಿ ಹನುಮಂತರಾಯಪ್ಪ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡವು ಆಲಮಟ್ಟಿಯ ರೂಮ್ವೊಂದರಲ್ಲಿ ವಾಸವಾಗಿದ್ದ ಎಇಇ ಮೇಲೆ ದಾಳಿ ಮಾಡಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ: ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ - Lokayukta
ವಿಜಯಪುರದ ಆಲಮಟ್ಟಿ ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
![ವಿಜಯಪುರ: ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ Lokayukta raid](https://etvbharatimages.akamaized.net/etvbharat/prod-images/18-11-2023/1200-675-20052738-thumbnail-16x9-bgk.jpg)
ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ
Published : Nov 18, 2023, 11:26 AM IST
|Updated : Nov 18, 2023, 11:45 AM IST
ಕೆಬಿಜೆಎನ್ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗುತ್ತಿಗೆದಾರನಿಗೆ ಬಿಲ್ ಮಂಜೂರಾತಿಗೆ 16 ಲಕ್ಷ ರೂ. ಲಂಚ ಕೇಳಿದ್ದರು. ಆರಂಭದಲ್ಲಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಗುತ್ತಿಗೆದಾರ ಅಭಿಷೇಕ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆದಿದೆ. ಎಇಇ ಕಾರು ಚಾಲಕನನ್ನು ಕೂಡ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಹಾಸ್ಟೆಲ್ ಆಹಾರ ಪೂರೈಕೆಯಲ್ಲಿ ವ್ಯತ್ಯಯ ಆರೋಪ: ವಿದ್ಯಾರ್ಥಿಗಳಿಂದ ವಿಜಯಪುರ ಡಿಸಿ ಮನೆಗೆ ಮುತ್ತಿಗೆ
Last Updated : Nov 18, 2023, 11:45 AM IST