ಕರ್ನಾಟಕ

karnataka

ETV Bharat / state

ವಿಜಯಪುರದ ಸರ್ಕಾರಿ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ - ಈಟಿವಿ ಭಾರತ ಕನ್ನಡ ನ್ಯೂಸ್​

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆಸ್ಪತ್ರೆಯ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

lokayukta-ride-on-vijayapur-government-hospital
ವಿಜಯಪುರದ ಸರ್ಕಾರಿ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

By

Published : Sep 27, 2022, 6:45 PM IST

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣನವರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸ್ವಚ್ಛತೆ, ರೋಗಿಗಳ ಕಾಳಜಿ ಕುರಿತು ಮಾಹಿತಿ ಕಲೆ ಹಾಕಿದರು.

ಅಲ್ಲದೇ, ಆಸ್ಪತ್ರೆಯ ವಿರುದ್ಧ ದಾಖಲಾಗಿರುವ ವಿವಿಧ ದೂರುಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಿದರು. ದಾಳಿ ವೇಳೆಯಲ್ಲಿ ಅಧಿಕಾರಿಗಳಾದ ಅರುಣ್ ನಾಯಕ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಪಿಎಫ್​ಐ ಎಸ್​ಡಿಪಿಐ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

ABOUT THE AUTHOR

...view details