ವಿಜಯಪುರ: ಲಾರಿ ಮತ್ತು ಕ್ಯಾಂಟರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ದೆಗಿನಾಳ ಕ್ರಾಸ್ ಬಳಿ ನಡೆದಿದೆ.
ಲಾರಿಗೆ ಕ್ಯಾಂಟರ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ - ವಿಜಯಪುರ
ಲಾರಿ ಮತ್ತು ಕ್ಯಾಂಟರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಲಾರಿಗೆ ಕ್ಯಾಂಟರ್ ಡಿಕ್ಕಿ
ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಇನ್ಸ್ಪನಿಬ್ತ್ರೆಬರುಗೆ ರವಾನಿಸಲಾಗಿದೆ. ಅಪಘಾತವಾದ ರಭಸಕ್ಕೆ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಅಪಘಾತದಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಜಿಲ್ಲೆಯ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.