ಕರ್ನಾಟಕ

karnataka

ETV Bharat / state

ಧ್ವಜಾರೋಹಣ ವೇಳೆ ಅಂಬೇಡ್ಕರ್ ಭಾವಚಿತ್ರ ಇಡಲು ನಿರಾಕರಣೆ: ಮುಖ್ಯ ಶಿಕ್ಷಕ ಅಮಾನತು - ವಿಜಯಪುರ

74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡುವುದಿಲ್ಲ ಎಂದ ಮುಖ್ಯ ಶಿಕ್ಷಕನನ್ನು ಶಿಕ್ಷಣ ಇಲಾಖೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

head master suspended
ಮುಖ್ಯ ಶಿಕ್ಷಕ ಎಸ್.ಎಸ್. ಮೊಕಾಶಿ ಅಮಾನತು

By

Published : Aug 16, 2020, 10:00 AM IST

ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಹಾಗಾಗಿ ಧ್ವಜಾರೋಹಣದ ವೇಳೆ ಅವರ ಭಾವಚಿತ್ರ ಇಡುವುದಿಲ್ಲ ಎಂದ ಮುಖ್ಯ ಶಿಕ್ಷಕನನ್ನು ಶಿಕ್ಷಣ ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ.

ಮಾಡಬಾಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಸ್. ಮೊಕಾಶಿ ಅಮಾನತು

ಸಿಂದಗಿ ತಾಲೂಕಿನ ಮಾಡಬಾಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಸ್. ಮೊಕಾಶಿ ಅಮಾನತುಗೊಂಡವರು. 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಇಡುವ ಬಗ್ಗೆ ಗ್ರಾಮಸ್ಥರೊಂದಿಗೆ ತಕರಾರು ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ವಿಡಿಯೋದಲ್ಲಿ ಅಂಬೇಡ್ಕರ್ ಭಾವಚಿತ್ರ ಇಟ್ಟರೆ ಮಕ್ಕಳಿಗೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ. ಹೀಗಾಗಿ ಅಂಬೇಡ್ಕರ್ ಭಾವಚಿತ್ರ ಇಡುವುದಿಲ್ಲ ಎಂದು ವಾದಿಸಿದ್ದರು.

ಈ ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರನ್ನು ಡಿಡಿಪಿಐ ಪ್ರಸನ್ನಕುಮಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details