ವಿಜಯಪುರ:ಕಾರ್ಖಾನೆಯ ಕಲುಷಿತ ನೀರು ಹಳ್ಳಕ್ಕೆ ಬಿಡಬಾರದೆಂದು ಆಗ್ರಹಿಸಿ ಮುದ್ದೇಬಿಹಾಳ ತಾಲೂಕಿನ ಮದರಿ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಬೆಳಗ್ಗೆಯಿಂದಲೇ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಗ್ರಾಮಸ್ಥರು, ನಾವು ಕಳೆದ ಆರು ವರ್ಷಗಳಿಂದ ಇದೇ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಇನ್ಮುಂದೆ ಯಾವುದೇ ಕಾರಣಕ್ಕೂ ಹಳ್ಳಕ್ಕೆ ಕಾರ್ಖಾನೆಯ ನೀರು ಬಿಡಬಾರದೆಂದು ಆಕ್ರೋಶ ವ್ಯಕ್ತಪಡಿಸಿದರು. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.