ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಚಿಮ್ಮಲಗಿ ಏತ ನೀರಾವರಿ ಕಾಲುವೆಯಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು - Man died in muddebihal
ಚಿಮ್ಮಲಗಿ ಏತ ನೀರಾವರಿ ಕಾಲುವೆಯಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಪಟ್ಟಣದ ಆಶ್ರಯ ಕಾಲನಿ ನಿವಾಸಿ ವಾಸು ಆನಂದ ಹರಣಶಿಕಾರಿ (33) ಮೃತ ವ್ಯಕ್ತಿ. ಈತ ಬುಧವಾರವೇ ಕಾಲುವೆಗೆ ಬಿದ್ದಿದ್ದು, ಶವ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಬಿ.ಎಸ್. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದಾಗ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪಿಎಸ್ಐ ಮಲ್ಲಪ್ಪ ಮಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.