ವಿಜಯಪುರ: ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.
ನಿಡಗುಂದಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ ಬೆಂಗಳೂರು ಮೂಲದ ಡಾ. ಜೋಶಿ ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಇದ್ದ ಮತ್ತಿಬ್ಬರು ಗಾಯಗೊಂಡಿದ್ದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದು ಪರಾರಿ ಆಗಲು ಯತ್ನಿಸಿದ್ದ ಲಾರಿ ಚಾಲಕನನ್ನು ಬಂಧಿಸಲಾಗಿದೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.