ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ, ಬೇರ್ಪಟ್ಟ ರುಂಡ-ಮುಂಡ ಕಂಡು ಬೆಚ್ಚಿಬಿದ್ದ ಜನ - ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.

man-lies-on-tracks-to-commit-suicide-in-vijayapur
ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ, ಬೇರ್ಪಟ್ಟ ರುಂಡ-ಮುಂಡ ಕಂಡು ಬೆಚ್ಚಿಬಿದ್ದ ಜನ

By

Published : Nov 12, 2022, 11:15 AM IST

ವಿಜಯಪುರ:ಜೀವನದಲ್ಲಿ ಜುಗುಪ್ಸೆಗೊಂಡ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಗಣೇಶನಗರದ ಬಳಿ ನಡೆದಿದೆ.‌ ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಮುಂಬೈ-ಗದಗ ಮಾರ್ಗ ಮಧ್ಯ ಸಂಚರಿಸುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ರೈಲ್ವೆ ಹಳಿಯ ಮೇಲೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ರುಂಡ-ಮುಂಡ ಬೇರ್ಪಟ್ಟಿದೆ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರು ಛಿದ್ರಗೊಂಡ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಅಕ್ಕನ ಮೊಬೈಲ್​ ಗೀಳು ಕಂಡು ಪಾಸ್​ವರ್ಡ್​ ಇಟ್ಟ ತಮ್ಮ: ದೊಡ್ಡಬಳ್ಳಾಪುರದಲ್ಲಿ ನೇಣಿಗೆ ಶರಣಾದ ಯುವತಿ

ABOUT THE AUTHOR

...view details