ಕರ್ನಾಟಕ

karnataka

ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ: ಜೀವ ಬೆದರಿಕೆ - ವಿಜಯಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಶಾಲೆ ಮುಗಿಸಿಕೊಂಡು ಬರುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ವರದಿಯಾಗಿದೆ.

man raped minor girl in vijaypur
ವಿಜಯಪುರ

By

Published : Oct 28, 2021, 7:29 PM IST

Updated : Oct 29, 2021, 5:12 AM IST

ವಿಜಯಪುರ: ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕು ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

ಗ್ರಾಮದ ತೋಟದ ಮನೆಯಲ್ಲಿ ವಾಸಿಸುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿನಿಯನ್ನು ಆಕೆಯ ಗ್ರಾಮದ ನಿವಾಸಿ ಶಾಂತಪ್ಪ‌ ಕುರಿಮನಿ ಎಂಬಾತ ಬಲವಂತವಾಗಿ ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಅಕ್ಟೋಬರ್​​ 27ರಂದು ಬಾಲಕಿ ಶಾಲೆ ಮುಗಿಸಿಕೊಂಡು ವಾಪಸ್ ತೋಟದ ಮನೆಗೆ ವಾಪಸ್​ ಆಗುತ್ತಿದ್ದ ವೇಳೆ ಬೈಕ್​​ನಲ್ಲಿ ಅಡ್ಡಗಟ್ಟಿದ ಆರೋಪಿ ಶಾಂತಪ್ಪ ಕುರಿಮನಿ, ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಕುಟುಂಬಸ್ಥರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:ಮಣಿಪಾಲದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Last Updated : Oct 29, 2021, 5:12 AM IST

ABOUT THE AUTHOR

...view details