ವಿಜಯಪುರ:ಜಿಲ್ಲೆಯಲ್ಲಿ ಮಟ್ಕಾ ದಂಧೆ ಹಾವಳಿ ಹೆಚ್ಚಾಗಿದೆ. ರಾಜಾರೋಷವಾಗಿ ಮನೆಯಲ್ಲಿ ಮಟ್ಕಾ ನಂಬರ್ ಬರೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಮಟ್ಕಾ ದಂಧೆ ಪ್ರಕರಣ ಬೆಳಕಿಗೆ ಬಂದಿದೆ. ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಸಿ, ಎಸ್ಪಿಗೆ ಸ್ಥಳೀಯರು ಪತ್ರ ಬರೆದು ಆಗ್ರಹಿಸಿದ್ದಾರೆ. ದೇವರ ಹಿಪ್ಪರಗಿ ಪಟ್ಟಣದಲ್ಲಿಯೇ 15 ರಿಂದ 20 ಜನರು ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ.