ಕರ್ನಾಟಕ

karnataka

ETV Bharat / state

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ: ಎಂ.ಬಿ.ಪಾಟೀಲ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಸರನ್ನು ಹಾಳು ಮಾಡುವ ಸಲುವಾಗಿ ಬಿಜೆಪಿ ಈ ರೀತಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

mb patil reaction on ccb raid
ಡಿಕೆಶಿ ಮನೆ ಮೇಲೆ ಸಿಬಿಐ ದಾಳಿಯು ರಾಜಕೀಯ ಪ್ರೇರಿತ: ಮಾಜಿ ಸಚಿವ ಎಂ.ಬಿ ಪಾಟೀಲ

By

Published : Oct 7, 2020, 12:45 PM IST

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯು ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಸರು ಹಾಳು ಮಾಡುವ ಸಲುವಾಗಿ ಬಿಜೆಪಿ ಈ ರೀತಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಮಾಜಿ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯೆ

ಈವರೆಗೆ ಎಷ್ಟು ಜನ ಬಿಜೆಪಿ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ?, ಬಿಜೆಪಿ ಹಿರಿಯ ಮುಖಂಡರ ಮೇಲೆ ಆರೋಪಗಳೇ ಇಲ್ಲವೇ? ಎಂದು ಅವರು ಪ್ರಶ್ನಿಸಿದರು. ಬಿಜೆಪಿ ಮುಖಂಡರ ನಿವಾಸದ ಮೇಲೆ ಏಕೆ ಸಿಬಿಐ ದಾಳಿ ನಡೆಸಿಲ್ಲ?. ಈ ಹಿಂದೆ ಗುಜರಾತ್​​ ಶಾಸಕರು ಕರ್ನಾಟಕ ಆಶ್ರಯಿಸಿಕೊಂಡು ಬಂದಾಗ ಡಿ.ಕೆ.ಶಿವಕುಮಾರ್​​ ಅವರ ರಕ್ಷಣೆಗೆ ನಿಂತಿದ್ದರು. ಆ ವೇಳೆ ದಾಳಿ ನಡೆಸಲಾಗಿತ್ತು. ಸದ್ಯ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಈ ರೀತಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷ ಮುಖಂಡರ ಮನೆ ಮೇಲೆ ದಾಳಿ ನಡೆಸುತ್ತಿರುವುದು ರಾಜಕೀಯ ದುರುದ್ದೇಶವೇ ಹೊರತು ಮತ್ತೇನು ಅಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇವೆಲ್ಲವನ್ನು ಗಮನಿಸಿದರೆ, ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯವಿರುವ ಹಾಗಿದೆ. ಇದೇ ಉದ್ದೇಶಕ್ಕೆ ಕಾಂಗ್ರೆಸ್ ಮುಖಂಡರನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ಮಾಡಿ, ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ, ಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್​​ನ ಇಬ್ಬರು ಅಭ್ಯರ್ಥಿಗಳು ಸಹ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details