ಕರ್ನಾಟಕ

karnataka

ETV Bharat / state

ಗೃಹಲಕ್ಷ್ಮಿಗೆ ಹೆದರಿ ಕೇಂದ್ರ ಸರ್ಕಾರದಿಂದ ಗ್ಯಾಸ್​ ಸಿಲಿಂಡರ್ ಬೆಲೆ ಇಳಿಕೆ: ಎಂ.ಬಿ.ಪಾಟೀಲ - ಈಟಿವಿ ಭಾರತ್​ ಕನ್ನಡ ನ್ಯೂಸ್

ನಮ್ಮ ಗ್ಯಾರಂಟಿ ಯೋಜನೆಗಳಿಂದ ಆತಂಕಗೊಂಡ ಕೇಂದ್ರ ಬಿಜೆಪಿ ಸರ್ಕಾರ ಗ್ಯಾಸ್​ ಸಿಲಿಂಡರ್ ಬೆಲೆ ಇಳಿಸಿದೆ ಎಂದು ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.

ಸಚಿವ ಎಂ.ಬಿ ಪಾಟೀಲ
ಸಚಿವ ಎಂ.ಬಿ ಪಾಟೀಲ

By ETV Bharat Karnataka Team

Published : Aug 30, 2023, 9:58 PM IST

ಎಂ.ಬಿ.ಪಾಟೀಲ ಹೇಳಿಕೆ

ವಿಜಯಪುರ :ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ ಹೆದರಿ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್‌ಗೆ 200 ರೂ. ಕಡಿಮೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಲೇವಡಿ ಮಾಡಿದರು. ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೇವಲ 100 ದಿನಗಳ ಅಧಿಕಾರವಧಿಯಲ್ಲಿ ಜನತೆಗೆ ಕೊಟ್ಟ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನ್ನು ಈಡೇರಿಸಿದ್ದೇವೆ. ಇದರಿಂದ ಕೇಂದ್ರ ಸರ್ಕಾರ ಆತಂಕಗೊಂಡಿದೆ. ಮುಂದಿನ ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ, ದೇಶದಲ್ಲಿ ಲೋಕಸಭೆ ಚುನಾವಣೆ ಬರಲಿದೆ. ಇದು ಅವರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ ಎಂದರು.

ಇದನ್ನೂ ಓದಿ :ದಾವಣಗೆರೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಈ ಗ್ಯಾರಂಟಿ ಯೋಜನೆಗಳನ್ನು ದೇಶಾದ್ಯಂತ ವಿಸ್ತರಿಸುವುದಾಗಿ ಹೇಳಿರುವ ಕಾರಣ, ಸೋಲಿನ ಭೀತಿ ಈಗಾಗಲೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಡುತ್ತಿದೆ. ಕಳೆದ 9 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದರೂ ಸಹ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪೂರ್ವ ಕೊಟ್ಟ ಭರವಸೆ ಈಡೇರಿಸಲು ಸಾಧ್ಯವಾಗಿಲ್ಲ. ಈಗ ಕಾಂಗ್ರೆಸ್ ಸರ್ಕಾರ ದಿಟ್ಟ ಹೆಜ್ಜೆ ಇಟ್ಟ ಮೇಲೆ ಹೆದರಿ ಸಿಲಿಂಡರ್ ಬೆಲೆ ಇಳಿಸಿದ್ದಾರೆ ಎಂದು ಹೇಳಿದರು.

ಜಿಗಜಿಣಗಿಗೆ ಟಿಕೆಟ್ ಸಿಗುತ್ತಾ?:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಲೋಕಸಭೆ ಚುನಾವಣೆಯವರೆಗೆ ಮಾತ್ರ ಇರುತ್ತದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ನೀಡಿದ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವರು, ಮೊದಲು ಮುಂದಿನ ಎಂಪಿ ಚುನಾವಣೆಯಲ್ಲಿ ಅವರ ಪಕ್ಷದಿಂದ ಟಿಕೆಟ್ ಸಿಗುತ್ತಾ ಎನ್ನುವುದನ್ನು ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು. ಮೊದಲೇ ಬಿಜೆಪಿಯಲ್ಲಿ ಲೋಕಸಭೆ ಸ್ಥಾನಕ್ಕೆ ಸ್ಪರ್ಧಿಸಲು ಹೆಚ್ಚು ಆಕಾಂಕ್ಷಿಗಳಿದ್ದಾರೆ. ಅವರಲ್ಲಿಯೇ ಒಳಹೊಡೆತ ಇದೆ ಎನ್ನುವ ಮೂಲಕ ಜಿಲ್ಲಾ ಬಿಜೆಪಿಯಲ್ಲಿರುವ ಭಿನ್ನಮತವನ್ನು ಪರೋಕ್ಷವಾಗಿ ರಮೇಶ ಜಿಗಜಿಣಗಿ ಅವರಿಗೆ ತಿಳಿಸಿದರು.

ಅಧಿಕಾರದ ಚುಕ್ಕಾಣಿ ಹಿಡಿದು ಕೇವಲ 100 ದಿನಗಳಾಗಿದೆ.ರಾಜ್ಯ ಬಿಜೆಪಿ ಹೊರತಂದಿರುವ ಕರಾಳ ದಿನ ಕಿರು ಹೊತ್ತಿಗೆ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಎಂ.ಬಿ ಪಾಟೀಲ, ಬಿಜೆಪಿ ನಡೆಸಿದ 9 ವರ್ಷಗಳ ಅಧಿಕಾರಾವಧಿಯನ್ನು ಕರಾಳ ದಿನದಲ್ಲಿಯೇ ಕಳೆದಿದ್ದೇವೆ. ಇದಕ್ಕಿಂತ ಬೇಕೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ :ರಕ್ಷಾ ಬಂಧನದ ಉಡುಗೊರೆಯಾಗಿ ಸರ್ಕಾರ ಗೃಹ ಲಕ್ಷ್ಮಿ ಯೋಜನೆ ಜಾರಿ ಮಾಡಿದೆ: ಸಚಿವ ಮಧು ಬಂಗಾರಪ್ಪ

ABOUT THE AUTHOR

...view details