ವಿಜಯಪುರ: ಜಿಲ್ಲೆಯಲ್ಲಿ ಒಟ್ಟು 9 ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿನ ಬಾಕಿ ಹಣವನ್ನು ಶ್ರೀಘ್ರದಲ್ಲೇ ರೈತರಿಗೆ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಕ್ಕರೆ ಹಾಗೂ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಜಿಲ್ಲಾಧಿಕಾರಿಗೆ ಸೂಚಿಸಿದರು.
ಕಬ್ಬಿನ ಬಾಕಿ ಹಣ ನೀಡದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಡಿಸಿಗೆ ಸಚಿವ ಸಿ.ಟಿ. ರವಿ ಸೂಚನೆ
ವಿಜಯಪುರ ಜಿಲ್ಲೆಯಲ್ಲಿ ಒಟ್ಟು 9 ಸಕ್ಕರೆ ಕಾರ್ಖಾನೆಗಳು, ರೈತರ ಕಬ್ಬಿನ ಬಿಲ್ನ ಬಾಕಿ ಹಣವನ್ನು ಶ್ರೀಘ್ರದಲ್ಲೇ ರೈತರಿಗೆ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಕ್ಕರೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಕಬ್ಬಿನ ಬಾಕಿ ಹಣ ನೀಡದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ..ಜಿಲ್ಲಾಧಿಕಾರಿಗೆ ಸಚಿವ ಸಿ.ಟಿ.ರವಿ ಸೂಚನೆ
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರೈತರ ಕಬ್ಬಿನ ಬಿಲ್ನ ಬಾಕಿ ಹಣವನ್ನು ನೀಡಲು ವಿಳಂಬ ಮಾಡಿದ ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರಿಗೆ ಸೂಚನೆ ನೀಡಿದ್ರು.
ಇನ್ನು, ಕಾರ್ಖಾನೆಗಳಿಗೆ ಹೋಗುವ ರಸ್ತೆ ಅಭಿವೃದ್ಧಿಗೆ 1.14 ಕೋಟಿ ರೂ. ಹಣದಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸಭೆಯಲ್ಲಿ ತಿಳಿಸಿದರು.