ವಿಜಯಪುರ: ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್, ಫಸಲ್ ಭೀಮಾ ಯೋಜನೆ, ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿದ್ಯಾನಿಧಿ ಯೋಜನೆಗಳು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.100 ರಷ್ಟು ಫಲಾನುಭವಿಗಳಿಗೆ ತಲುಪಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸಿಂದಗಿಯಲ್ಲಿ ಕೇಂದ್ರದ ಯೋಜನೆಗಳು ಶೇ 100ರಷ್ಟು ಜಾರಿಯಾಗಿವೆ: ಸಚಿವೆ ಶಶಿಕಲಾ ಜೊಲ್ಲೆ - ಸಿಂದಗಿ
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು ಗೆಲ್ಲಬೇಕೆನ್ನುವುದು ಸಿಂದಗಿ ಕ್ಷೇತ್ರದ ಜನರ ಅಪೇಕ್ಷೆ. ಹೀಗಾಗಿ ಅವರು ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ರಮೇಶ್ ಭೂಸನೂರ ಅವರು ಗೆಲ್ಲಬೇಕೆನ್ನುವುದು ಸಿಂದಗಿ ಕ್ಷೇತ್ರದ ಜನರ ಅಪೇಕ್ಷೆಯಾಗಿದೆ ಎಂದರು.
ರಮೇಶ್ ಭೂಸನೂರ ಶಾಸಕರಾಗಿದ್ದಾಗ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಭವನ, ಶಾದಿಮಹಲ್, ಅಂಬೇಡ್ಕರ್ ಭವನ, ದೇವಸ್ಥಾನಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅವರು ಅಧಿಕಾರದಲ್ಲಿ ಇಲ್ಲದಿದ್ದರೂ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಕೆಲಸ ಮಾಡಿದ್ದಾರೆ. ಈಗ ಅವರು ಮತ್ತೆ ಚುನಾವಣೆಯಲ್ಲಿ ಗೆದ್ದುಬಂದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಇನ್ನಷ್ಟು ಯೋಜನೆಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ಮಾಡಲು ಅನುಕೂಲ ವಾಗುತ್ತದೆ. ಈ ಚುನಾವಣೆಯಲ್ಲಿ ರಮೇಶ್ ಬೂಸನೂರ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.