ವಿಜಯಪುರ:ಕೆಲವರ ಹಿತ ಕಾಪಾಡಲು ಸಚಿವ ಸಂಪುಟ ಪುನಾರಚನೆಯಲ್ಲಿ ತಮ್ಮನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.
ನನ್ನನ್ನು ಸಂಪುಟದಿಂದ ಕೈಬಿಡಲ್ಲ: ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ - ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ
ಪಕ್ಷದ ಹಿರಿಯರು ಬಯಸಿದರೆ ಯಾವುದೇ ತ್ಯಾಗಕ್ಕೂ ಸಿದ್ಧವಿರುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
![ನನ್ನನ್ನು ಸಂಪುಟದಿಂದ ಕೈಬಿಡಲ್ಲ: ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ dffff](https://etvbharatimages.akamaized.net/etvbharat/prod-images/768-512-7460452-thumbnail-3x2-vish.jpg)
ನಗರದಲ್ಲಿ ಮಾತನಾಡಿದ ಅವರು, ಸಂಪುಟದಿಂದ ಕೈಬಿಡುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ. ಇಡೀ ಸಂಪುಟದಲ್ಲಿ ನಾನು ಏಕೈಕ ಮಹಿಳಾ ಸಚಿವೆಯಾಗಿದ್ದೇನೆ. ಹೀಗಾಗಿ ಪಕ್ಷದ ಮುಖಂಡರು, ಮುಖ್ಯಮಂತ್ರಿಗಳು ನನ್ನನ್ನು ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.
ನಾನು ಎರಡು ಸಲ ಶಾಸಕಿಯಾಗಿ ಸಚಿವೆಯಾಗಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ. ಯಾರೂ ನನಗೆ ವಿರೋಧ ವ್ಯಕ್ತಪಡಿಸಿಲ್ಲ. ಹೀಗಾಗಿ ಸಂಪುಟದಿಂದ ತಮ್ಮನ್ನು ಕೈಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಹಿರಿಯರು ಬಯಸಿದರೆ ಯಾವುದೇ ತ್ಯಾಗಕ್ಕೂ ಸಿದ್ಧವಿರುವುದಾಗಿ ಇದೇ ವೇಳೆ ಹೇಳಿದರು.