ಕರ್ನಾಟಕ

karnataka

ETV Bharat / state

ವಿಜಯಪುರ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಬಾಲಕ ನಾಪತ್ತೆಯಾಗಿದ್ದನು. ಇಂದು ಆತ ಶವವಾಗಿ ಪತ್ತೆಯಾಗಿದ್ದಾನೆ.

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ
Missing boy dead body found in lake at Vijayapura

By

Published : Dec 27, 2020, 2:24 PM IST

ವಿಜಯಪುರ:ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಅರುಣ್ ಭಜಂತ್ರಿ (12) ಮೃತ ಬಾಲಕ. ಕಳೆದ ಡಿ.21 ರಂದು ಬಾಲಕ ಅರುಣ್ ಮನೆಯಿಂದ ಕಾಣೆಯಾಗಿದ್ದನು. ಈ ಸಂಬಂಧ ಡಿ.23 ರಂದು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪೋಷಕರು ಪ್ರಕರಣ ದಾಖಲಿಸಿದ್ದರು. ಇಂದು ಯರನಾಳ ಗ್ರಾಮದಲ್ಲಿರುವ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಓದಿ: ಗ್ರಾಪಂ ಅಭ್ಯರ್ಥಿ ಸೂಚಕರ ಮೇಲೆ ಹಲ್ಲೆ ಆರೋಪ: ಸ್ಥಳಕ್ಕೆ ದೌಡಾಯಿಸಿದ ಪಿಎಸ್ಐ

ABOUT THE AUTHOR

...view details