ಮುದ್ದೇಬಿಹಾಳ(ವಿಜಯಪುರ):ಮಹಾರಾಷ್ಟ್ರ, ಕೇರಳ ರಾಜ್ಯಗಳ ವಿವಿಧ ಜಿಲ್ಲೆಗಳಿಂದ ಬರುವ ಕಾರ್ಮಿಕರಿಗೆ ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಕಡ್ಡಾಯವಾಗಿದ್ದು, ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಅಚ್ಚುಕಟ್ಟಾಗಿ ನಿರ್ವಹಿಸಿ... ಅಧಿಕಾರಿಗಳಿಗೆ ಶಾಸಕ ನಡಹಳ್ಳಿ ಸೂಚನೆ - Vijayapura News
ಮುದ್ದೇಬಿಹಾಳ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಮಹಾರಾಷ್ಟ್ರ, ಕೇರಳದ ವಿವಿಧ ಜಿಲ್ಲೆಗಳಿಂದ ಬರುವ ಕಾರ್ಮಿಕರಿಗೆ ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಕಡ್ಡಾಯವಾಗಿದ್ದು, ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.
ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಅಚ್ಚುಕಟ್ಟಾಗಿ ನಿರ್ವಹಿಸಿ..ಅಧಿಕಾರಿಗಳಿಗೆ ಶಾಸಕ ನಡಹಳ್ಳಿ ಸೂಚನೆ
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬಂದಿರುವ ಕಾರ್ಮಿಕರನ್ನ ಮೊದಲು ಈ ಕಾಲೇಜಿಗೆ ತಂದು ಸರದಿಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ನಂತರ ಅವರನ್ನ ಆಯಾ ಊರುಗಳಲ್ಲಿರುವ ಸರ್ಕಾರಿ ಶಾಲೆ, ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಮಾಡಬೇಕು ಎಂದರು.
ಇನ್ನು, ಕಾಲೇಜಿನಲ್ಲಿ ರಾತ್ರಿ ಬಂದಿಳಿಯುವ ಕಾರ್ಮಿಕರಿಗೆ ಅದರಲ್ಲೂ ಮಹಿಳೆಯರಿಗೆ ಉತ್ತಮ ಶೌಚಾಲಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ರು.