ಕರ್ನಾಟಕ

karnataka

ETV Bharat / state

ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ - Muddebihala

ಗೆದ್ದಲಮರಿ ಗ್ರಾಮದ ರಾಮ ಮಂದಿರದಲ್ಲಿ ಕೆಬಿಜೆಎನ್‌ಎಲ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಪ್ರವಾಹ ಪೀಡಿತ ಗೆದ್ದಲಮರಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಚಾಲನೆ ನೀಡಿದರು.

Muddebihala
ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

By

Published : Aug 29, 2020, 10:38 PM IST

ಮುದ್ದೇಬಿಹಾಳ: ಪ್ರವಾಹ ಹಾಗೂ ಇನ್ನಿತರ ಸಂದರ್ಭಗಳಲ್ಲಿ ತಾಲೂಕಿನ 68 ಹಳ್ಳಿಗಳ ಅಭಿವೃದ್ಧಿಗೆ ತಲಾ ಎರಡು ಕೋಟಿ ರೂ.ಅನುದಾನ ಬಿಡುಗಡೆ ಮಾಡಿಸಿ ಟೆಂಡರ್ ಕರೆದು ಕೆಲಸ ಆರಂಭಿಸಲು ಭೂಮಿ ಪೂಜೆ ಮಾಡುತ್ತಿರುವುದಾಗಿ ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ತಾಲೂಕಿನ ಗೆದ್ದಲಮರಿ ಗ್ರಾಮದ ರಾಮ ಮಂದಿರದಲ್ಲಿ ಕೆಬಿಜೆಎನ್‌ಎಲ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಪ್ರವಾಹ ಪೀಡಿತ ಗೆದ್ದಲಮರಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ನಾವೆಲ್ಲ ಅಭಿವೃದ್ಧಿಯಿಂದ ವಂಚಿತರಾಗಿದ್ದೆವು. ಬಿಜೆಪಿ ಸರ್ಕಾರ ಬಂದ ನಂತರ ಪ್ರವಾಹ ಬಂದಿತು. ಅದು ಮರೆಯಾಗುವಷ್ಟರಲ್ಲಿಯೇ ಕೊರೊನಾ ವೈರಸ್ ಹಾವಳಿ ಶುರುವಾಯಿತು. ಹೀಗಿದ್ದರೂ ಅಭಿವೃದ್ಧಿಗೆ ಅನುದಾನ ಕೊಡುವುದರಲ್ಲಿ ಸರ್ಕಾರ ಹಿಂದೇಟು ಹಾಕಿಲ್ಲ. ಇದಕ್ಕಾಗಿ ಸಿಎಂ ಯಡಿಯೂರಪ್ಪನವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಇನ್ನು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಪಿಡಿಓ ಶೋಭಾ ಮುದಗಲ್ ಹಾಗೂ ಗ್ರಾಮಸ್ಥರು ಇದ್ದರು.

ABOUT THE AUTHOR

...view details