ವಿಜಯಪುರ :ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಗೃಹಸಚಿವರು ತೋರುತ್ತಿರುವ ಸಾಫ್ಟ್ ಕಾರ್ನರ್ ನೋಡಿದ್ರೆ ರಾಜ್ಯಕ್ಕೆ ಗೃಹಸಚಿವರು ಬೇಕಾಗಿದ್ದಾರೆ ಎಂದು ಮಾಧ್ಯಮದಲ್ಲಿ ಪ್ರಕಟಣೆ ಹೊರಡಿಸುವುದು ಉತ್ತಮ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸ್ವಪಕ್ಷಿಯ ಸಚಿವರ ಮೇಲೆಯೇ ವ್ಯಂಗವಾಡಿದರು.
ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಗೃಹ ಇಲಾಖೆ ಎಲ್ಲೆಲ್ಲಿ ವೀಕ್ ಇದೆ ಅಲ್ಲಿ ಇಂಥ ಘಟನೆಗಳು ನಡೆಯುತ್ತವೆ. ಹೀಗಾಗಿ, ರಾಜ್ಯಕ್ಕೆ ಒಬ್ಬ ಸಮರ್ಥ, ಸ್ಟ್ರಾಂಗ್ ಗೃಹಸಚಿವರು ಬೇಕಾಗಿದ್ದಾರೆ. ಈ ಕಾರಣಕ್ಕೆ ಗೃಹಸಚಿವರು ಬೇಕಾಗಿದ್ದಾರೆ ಎಂದು ಪ್ರಕಟಣೆ ನೀಡಲಿ ಎಂದರು.
ಸ್ಪಷ್ಟ ಬಹುಮತ ಬರಬೇಕು :ನಿನ್ನೆ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಎಲ್ಲ ನಾಯಕರಿಗೂ ಸ್ಪಷ್ಟ ಸಂದೇಶ ನೀಡಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಪಕ್ಷ ಅಧಿಕಾರಕ್ಕೆ ಬರಲು ನಾಯಕರು ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ತಲುಪಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.