ವಿಜಯಪುರ: ಸಚಿವ ಸಂಪುಟ ವಿಸ್ತರಣೆ, ಶಾಸಕರ ಅಸಮಾಧಾನ ಹಿನ್ನೆಲೆಯಲ್ಲಿ ತಕ್ಷಣ ಪಕ್ಷದ ಶಾಸಕಾಂಗ ಸಭೆ ಕರೆಯಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ ಎಂದು ಯತ್ನಾಳ ಬೆಂಬಲಿಗ ಮೂಲಗಳು ತಿಳಿಸಿವೆ.
ಸಿಎಂಗೆ ಪತ್ರ ಬರೆದ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಸಚಿವ ಸಂಪುಟ ವಿಸ್ತರಣೆ, ಶಾಸಕರ ಅಸಮಾಧಾನ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ ಎಂದು ಯತ್ನಾಳ ಬೆಂಬಲಿಗ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳ ಹಿಂದೆ ಕೂಡಲಸಂಗಮ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ಲಭಿಸದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಫೆ. 12ರಂದು ಬಿಜೆಪಿಯ ಲಿಂಗಾಯತ ಶಾಸಕರ ಸಭೆ ಕರೆದು ಚರ್ಚೆ ನಡೆಸುವುದಾಗಿ ನೀಡಿರುವ ಹೇಳಿಕೆ ಹಿನ್ನೆಲೆ, ಲಿಂಗಾಯತರಾಗಿರುವ ಬಿಜೆಪಿ ಶಾಸಕ ಯತ್ನಾಳ ಪತ್ರ ತೀವ್ರ ಸಂಚಲನ ಮೂಡಿಸಿದೆ.
ಬಜೆಟ್ ಬಗ್ಗೆ ಚರ್ಚಿಸಲು, ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಆಗ್ರಹಿಸಿ, ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾರು ಪ್ರಾತಿನಿಧ್ಯ, ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು, ಅಸಮಾಧಾನ ಹೋಗಲಾಡಿಸಲು ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದಾರೆ ಎನ್ನಲಾಗ್ತಿದೆ.