ವಿಜಯಪುರ: ನನಗೆ ಸಚಿವ ಸ್ಥಾನ ಸಿಗದಿದ್ದರೂ ಜಿಲ್ಲೆಯಲ್ಲಿ ಅಧಿಕಾರಿಗಳು ಒಳ್ಳೆಯವರಿರುವ ಕಾರಣ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಸಚಿವ ಸ್ಥಾನಕ್ಕಾಗಿ ಯಾವತ್ತೂ ಲಾಬಿ ನಡೆಸಿಲ್ಲ: ಬಸನಗೌಡ ಪಾಟೀಲ ಯತ್ನಾಳ್ - crisis that threatens the survival of Karnataka government
ಸಚಿವ ಸ್ಥಾನ ನೀಡಿ ಎಂದು ಯಾವತ್ತೂ ಲಾಬಿ ನಡೆಸಿಲ್ಲ. ದಿನ ಬೆಳಗಾದರೆ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿಯವರ ಮನೆ ಮುಂದೆ ಕುಳಿತುಕೊಳ್ಳಲು ಆಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಬಸನಗೌಡ ಪಾಟೀಲ ಯತ್ನಾಳ್
ಸಚಿವ ಸ್ಥಾನ ನೀಡಿ ಎಂದು ಯಾವತ್ತೂ ಲಾಬಿ ನಡೆಸಿಲ್ಲ. ನಿತ್ಯ ಬೆಳಗಾದರೆ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿ ಮನೆ ಮುಂದೆ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು. ಅದರ ಕುರಿತು ಅವರೇ ನಿರ್ಧಾರ ಕೈಗೊಳ್ಳುತ್ತಾರೆ. ಈ ಬಗ್ಗೆ ನಾನು ಹೆಚ್ಚೇನೂ ಮಾತಾನಾಡುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ನನ್ನ ಕೆಲಸ ಎಂದು ಹೇಳಿದರು.