ಕರ್ನಾಟಕ

karnataka

ETV Bharat / state

ಮನೆ ಹಾನಿ ವರದಿಗೆ ಜಂಟಿ ಸಮೀಕ್ಷೆ, ಕುಡಿಯುವ ನೀರಿನ ಘಟಕ ದುರಸ್ತಿಗೆ ನಡಹಳ್ಳಿ ಸೂಚನೆ

"ನನಗೆ ಬಡವರ ಪರವಾಗಿ ಕೆಲಸ ಮಾಡುವವರು ಬೇಕು. ಕೆಲಸ ಮಾಡಲಾಗದವರು ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ" ಎಂದು ಮುದ್ದೇಬಿಹಾಳ ತಾಲೂಕು ಅಧಿಕಾರಿಗಳಿಗೆ ಆಹಾರ ಪೂರೈಕೆ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ತರಾಟೆಗೆ ತೆಗೆದುಕೊಂಡರು.

mla-nadahalli-directed-officials-to-repair-clean-drinking-water-unit
ಮುದ್ಧೇಬಿಹಾಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

By

Published : Aug 30, 2020, 10:35 PM IST

ಮುದ್ದೇಬಿಹಾಳ : "ಕೆಲಸ ಮಾಡಲಾಗದವರು ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ನನಗೆ ಬಡವರ ಪರವಾಗಿ ಕೆಲಸ ಮಾಡುವವರು ಬೇಕು" ಎಂದು ಆಹಾರ ಪೂರೈಕೆ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದ ದಾಸೋಹ ನಿಲಯದಲ್ಲಿ ಮತಕ್ಷೇತ್ರದ ತಾಳಿಕೋಟಿ ಹಾಗೂ ಮುದ್ದೇಬಿಹಾಳ ತಾಲೂಕುಗಳ ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒಗಳು, ಕಂದಾಯ ನಿರೀಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, "ಅಧಿಕಾರಿಗಳು ಕೆಲಸ ಮಾಡಲು ಆಗುವುದಿಲ್ಲವೆಂದರೆ ಮನೆಯಲ್ಲಿದ್ದುಕೊಂಡು ವಿಶ್ರಾಂತಿ ತೆಗೆದುಕೊಳ್ಳಿ. ನನಗೆ ಬಡವರ ಪರವಾಗಿ ಕೆಲಸ ಮಾಡುವವರು ಬೇಕು. ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ಸಮಸ್ಯೆ ಬಗ್ಗೆಯೇ ದೂರುಗಳು ಬರುತ್ತಿದ್ದು ಅದನ್ನು ಸರಿಪಡಿಸಬೇಕು" ಎಂದು ಹೇಳಿದರು.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಆಹಾರ ಪೂರೈಕೆ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸೂಚನೆ:

ಹದಿನೈದು ದಿನಗಳಲ್ಲಿ ಮತಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಯಾಗಿ ಜನರಿಗೆ ನೀರು ಪೂರೈಸುವಂತಾಗಬೇಕು. ಕೊನೆಯ ಪಕ್ಷ ಜನರಿಗೆ ಕುಡಿಯುವ ನೀರನ್ನೂ ಕೊಡದಿದ್ದರೆ ಮುಂದಿನ ಚುನಾವಣೆಯಲ್ಲಿ ಅವರು ನಮ್ಮನ್ನು ಬಿಡುವುದಿಲ್ಲ. ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ ವಹಿಸಿ ಕೆಲಸ ಮಾಡಿ ಎಂದರು.

ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸ್ಥಾನಿಕ ಪರಿಶೀಲನೆ:

ಆಗಸ್ಟ್‌ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಹಾಗೂ ಬಿದ್ದಿರುವ ಮನೆಗಳನ್ನು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸ್ಥಾನಿಕ ಪರಿಶೀಲನೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವಂತೆ ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ ಇದೇ ವೇಳೆ ಸೂಚನೆ ನೀಡಿದರು.

ಅಲ್ಲದೆ ಕಳೆದ ವರ್ಷ ಮನೆ ಬಿದ್ದಿರುವುದಕ್ಕೆ ಕೆಲವರಿಗೆ ಪರಿಹಾರ ಬಂದಿಲ್ಲ ಎಂಬ ಮಾಹಿತಿ ಇದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆಯೂ ತಿಳಿಸಿದರು. ಬೆಳೆ ಸಮೀಕ್ಷೆಯನ್ನು ಕೊನೆಯ ದಿನಾಂಕದವರೆಗೆ ಕಾಯದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಎಸಿ ತಿಳಿಸಿದರು.

For All Latest Updates

TAGGED:

ABOUT THE AUTHOR

...view details