ಕರ್ನಾಟಕ

karnataka

25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಶಾಸಕ ನಡಹಳ್ಳಿ

ನಮ್ಮ ತಾಲೂಕಿನಲ್ಲಿ ಕಲಿಯುವ ವಿದ್ಯಾರ್ಥಿಗಳು ಐಎಎಸ್ ಪಾಸ್ ಮಾಡಬೇಕು ಎಂಬುದು ನನ್ನ ಆಶಯ. ಅದಕ್ಕಾಗಿ ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಎನ್ ಎಮ್ ಬಿರಾದಾರ ಅವರ ಜೊತೆಗೆ ಮಾತನಾಡಿದ್ದೇನೆ. ಅದಕ್ಕೆ ರೂಪುರೇಷೆ ಸಿದ್ದಪಡಿಸಲಾಗುತ್ತದೆ ಎಂದರು.

By

Published : Jun 17, 2020, 9:29 PM IST

Published : Jun 17, 2020, 9:29 PM IST

ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಮುದ್ದೇಬಿಹಾಳ: ನಾನು ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯಲ್ಲಿ ರಾಜಕಾರಣ, ಹಸ್ತಕ್ಷೇಪ ಮಾಡುವುದಿಲ್ಲ ಎಂದು ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಹೇಳಿದರು.

ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಪಟ್ಟಣದ ತಮ್ಮ ನಿವಾಸದಲ್ಲಿ ಬಸವನ ಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ತಾಲೂಕುಗಳ ಎಸ್ಎಸ್ಎಲ್​ಸಿ ಪರೀಕ್ಷೆಗೆ ಹಾಜರಾಗಲಿರುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿ. ನಮ್ಮ ತಾಲೂಕಿನಲ್ಲಿ ಕಲಿಯುವ ವಿದ್ಯಾರ್ಥಿಗಳು ಐಎಎಸ್ ಪಾಸ್ ಮಾಡಬೇಕು ಎಂಬುದು ನನ್ನ ಆಶಯ. ಅದಕ್ಕಾಗಿ ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಎನ್ ಎಮ್ ಬಿರಾದಾರ ಅವರ ಜೊತೆಗೆ ಮಾತನಾಡಿದ್ದೇನೆ. ಅದಕ್ಕೆ ರೂಪುರೇಷೆ ಸಿದ್ದಪಡಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

For All Latest Updates

TAGGED:

ABOUT THE AUTHOR

...view details