ಮುದ್ದೇಬಿಹಾಳ (ವಿಜಯಪುರ): ಜೂನ್ 18ರಂದು ದ್ವಿತೀಯ ಪಿಯುಸಿ ಆಂಗ್ಲ ಭಾಷೆಯ ಪರೀಕ್ಷೆಯ ನಡೆಯಲಿದೆ. ಅಂದು ಪರೀಕ್ಷೆ ಬರೆಯಲಿರುವ ಅಂದಾಜು 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಉಚಿತವಾಗಿ ಮಾಸ್ಕ್ ವಿತರಿಸುವುದಾಗಿ ತಿಳಿಸಿದ್ದಾರೆ.
ನಾಳೆ ಪಿಯುಸಿ ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸಲಿರುವ ಶಾಸಕ ನಡಹಳ್ಳಿ - ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ
19 ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಮುದ್ದೇಬಿಹಾಳ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ ಮಧ್ಯಾಹ್ನ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಕಾರ್ಯಕ್ರಮ..
![ನಾಳೆ ಪಿಯುಸಿ ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸಲಿರುವ ಶಾಸಕ ನಡಹಳ್ಳಿ mla-nadahalli-ditribute-free-mars-to-puc-students-tommorrow-in-muddehihal](https://etvbharatimages.akamaized.net/etvbharat/prod-images/768-512-7604406-thumbnail-3x2-nadahalli.jpg)
ಪಿಯುಸಿ ಪರೀಕ್ಷಾರ್ಥಿಗಳಿಗೆ ನಾಳೆ ಶಾಸಕ ನಡಹಳ್ಳಿಯಿಂದ ಉಚಿತ ಮಾಸ್ಕ್ ವಿತರಣೆ
ಈ ಬಗ್ಗೆ ಶಾಸಕರ ಕಚೇರಿಯಿಂದ ಪ್ರಕರಣೆ ಬಿಡುಗಡೆ ಮಾಡಿದೆ. ಮುದ್ದೇಬಿಹಾಳ, ದೇವರ ಹಿಪ್ಪರಗಿ, ನಿಡಗುಂದಿ, ಸಿಂಧಗಿ ತಾಲೂಕುಗಳ 19 ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಮುದ್ದೇಬಿಹಾಳ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ ಮಧ್ಯಾಹ್ನ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.