ಮುದ್ದೇಬಿಹಾಳ:ಬಸವಕಲ್ಯಾಣ ವಿಧಾನಸಭಾ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಅವರ ಅಕಾಲಿಕ ನಿಧನಕ್ಕೆ ಬಿಜೆಪಿ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾನು ಒಬ್ಬ ಉತ್ತಮ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ. ಪಕ್ಷ ಬೇರೆಯಾಗಿದ್ದರೂ ಅವರೊಬ್ಬ ವಿಧಾನಸಭೆಯ ಸದಸ್ಯರು. ನಾವೆಲ್ಲ ವಿವಿಧ ವಿಷಯಗಳ ಕುರಿತು ಒಟ್ಟಾಗಿ ಚರ್ಚಿಸುವ ಸೌಹಾರ್ದತೆ ಬೆಳೆಸಿಕೊಂಡಿದ್ದೆವು. ಹಿಂದುಳಿದ ವರ್ಗಗಳ ನಾಯಕ ಎಂದೇ ಖ್ಯಾತರಾಗಿದ್ದ ಅವರು ಎಲ್ಲ ರಾಜಕಾರಣಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಪೂರ್ಣ ಅಧಿಕಾರ ಅನುಭವಿಸುವುದಕ್ಕೂ ಮುನ್ನವೇ ಇಹಲೋಕ ತ್ಯಜಿಸಿರುವುದು ವಿಷಾದಕರ ಎಂದರು.
ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ :ಕೊರೊನಾ ಸೋಂಕಿನಿಂದ ಅಗಲಿದ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದರು.