ಕರ್ನಾಟಕ

karnataka

ETV Bharat / state

ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್​​ಗೆ ಕೊರೊನಾ ಪಾಸಿಟಿವ್ - Corona to MLA Somnagowda Patil

ವಿಜಯಪುರ ದೇವರಹಿಪ್ಪರಗಿ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

MLA Somnagowda Patil tested Positive for Corona Virus
ಶಾಸಕ ಸೋಮನಗೌಡ ಪಾಟೀಲ್

By

Published : Aug 16, 2020, 10:36 AM IST

ವಿಜಯಪುರ: ದೇವರಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್​​ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಫೇಸ್​ಬುಕ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಆಗಸ್ಟ್​ 14 ರಂದು ಆರೋಗ್ಯ ತಪಾಸಣೆ ಹಾಗೂ ಕೊರೊನಾ ಪರೀಕ್ಷೆ ಮಾಡಿಸಿದ್ದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವೆ. ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಶಾಸಕರು ತಿಳಿಸಿದ್ದಾರೆ.

ಶಾಸಕರ ಫೇಸ್​ಬುಕ್​ ಪೋಸ್ಟ್

ಬೇಗನೆ ಗುಣಮುಖನಾಗಿ ಕ್ಷೇತ್ರದ ಸೇವೆಗೆ ಮರಳುತ್ತೇನೆ. ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಮನೆಯಲ್ಲಿ ಇರಬೇಕೆಂದು ಮನವಿ ಮಾಡಿದ್ದಾರೆ.

ABOUT THE AUTHOR

...view details