ವಿಜಯಪುರ: ನಗರದ ಜಿಲ್ಲಾಸ್ಪತ್ರೆಯಲ್ಲಿ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಕೋವಿಡ್ ಲಸಿಕೆ ಹಾಕಿಸಿಕೊಂಡ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ - ಕೊರೊನಾ ಲಸಿಕೆ ಹಾಕಿಸಿಕೊಂಡ ಶಾಸಕ ಬಸವನಗೌಡ ಯತ್ನಾಳ
ನಗರದ ಜಿಲ್ಲಾಸ್ಪತ್ರೆಯಲ್ಲಿ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಕೊರೊನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕೊರೊನಾ ಲಸಿಕೆ ಹಾಕಿಸಿಕೊಂಡ ಶಾಸಕ ಬಸವನಗೌಡ ಯತ್ನಾಳ
ಇದೇ ವೇಳೆ, ಭಾರತದಲ್ಲೇ ಅಭಿವೃದ್ಧಿಪಡಿಸಿದ ಅತ್ಯಂತ ಸುರಕ್ಷಿತ ಹಾಗೂ ಕೊರೊನಾವನ್ನು ಮಣಿಸಲು ಅಗತ್ಯವಿರುವ ಈ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಸ್ಪತ್ರೆ ವೈದ್ಯರಾದ ಶರಣಪ್ಪ ಕಟ್ಟಿ, ರಾಜಕುಮಾರ ಯರಗಲ್, ಎಸ್ ಎಲ್. ಲಕ್ಕಣ್ಣನವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.