ಕರ್ನಾಟಕ

karnataka

ETV Bharat / state

ವಿಜಯಪುರ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ - ವಿಜಯಪುರದಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳನ್ಜು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

mother suicide along with two children, A mother suicide along with two children in Vijayapura, Vijayapura crime news, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ, ವಿಜಯಪುರದಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ, ವಿಜಯಪುರ ಅಪರಾಧ ಸುದ್ದಿ
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

By

Published : Jul 13, 2022, 2:17 PM IST

ವಿಜಯಪುರ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿನಗೂರು ಗ್ರಾಮದಲ್ಲಿ ನಡೆದಿದೆ. ಅವ್ವಮ್ಮಾ ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ತಾಯಿ. ಕುರಿ ಕಾಯಲು ಪತಿ ಶ್ರೀಶೈಲ ಹೊರ ಹೋಗಿದ್ದಾಗ 3 ವರ್ಷ ಹಾಗೂ 1 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಹೆತ್ತ ಮಕ್ಕಳ ಮುಂದೇಯೇ ನೇಣಿಗೆ ಶರಣಾದರಾ ತಾಯಿ? : ಕೊಲೆ ಎಂದು ದೂರು ನೀಡಿದ ಕುಟುಂಬಸ್ಥರು

ಅವ್ವಮ್ಮಾ ಮತ್ತು ಶ್ರೀಶೈಲ ದಂಪತಿಗೆ ಒಟ್ಟು ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಉಳಿದ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ಹೋಗಿದ್ದರಿಂದ ಬದುಕುಳಿದ್ದಾರೆ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂದಗಿ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.

ABOUT THE AUTHOR

...view details