ವಿಜಯಪುರ: ಇತರೆ ರಾಜ್ಯ ಮತ್ತು ಜಿಲ್ಲೆಗಳಿಂದ ಮರಳಿರುವ ಜನರ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳ ಮನೆ-ಮನೆಗೆ ಭೇಟಿ ನೀಡಿ ಜ್ವರ ಲಕ್ಷಣವುಳ್ಳ ವ್ಯಕ್ತಿಗಳನ್ನು ಗುರುತಿಸಿ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದ್ದಾರೆ.
ಬೇರೆ ಕಡೆಯಿಂದ ಬಂದವರ ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ: ಡಿಸಿ ಸೂಚನೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಜಿಲ್ಲೆಯ 1,800 ಆಶಾ ಕಾರ್ಯಕರ್ತೆಯರು ಮತ್ತು 2,313 ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಿಲ್ಲೆಯ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಕೊರೊನಾ ಸೋಂಕು ಹೆಚ್ಚಿರುವ ರಾಜ್ಯ ಮತ್ತು ಜಿಲ್ಲೆಗಳಿಂದ ಮರಳಿರುವವರ ಬಗ್ಗೆ ಅಧಿಕೃತ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಜಿಲ್ಲೆಯ 1,800 ಆಶಾ ಕಾರ್ಯಕರ್ತೆಯರು ಮತ್ತು 2,313 ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಿಲ್ಲೆಯ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಕೊರೊನಾ ಸೋಂಕು ಹೆಚ್ಚಿರುವ ರಾಜ್ಯ ಮತ್ತು ಜಿಲ್ಲೆಗಳಿಂದ ಮರಳಿರುವವರ ಬಗ್ಗೆ ಅಧಿಕೃತ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಮಾದರಿಯಲ್ಲಿ ಸೂಕ್ತ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಮಾರ್ಚ್ ತಿಂಗಳ ಮೊದಲ ವಾರದಿಂದ ಮರಳಿರುವವರ ನಿಖರ ಅಂಕಿ ಅಂಶಗಳನ್ನು ಈ ಮುಖಾಂತರ ಸಂಗ್ರಹಿಸಬೇಕು ಎಂದು ತಿಳಿಸಿದ್ದಾರೆ.