ಕರ್ನಾಟಕ

karnataka

ETV Bharat / state

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುದ್ದೇಬಿಹಾಳ ತಹಶೀಲ್ದಾರ್​ಗೆ ಮನವಿ - ಭೂ ಸುಧಾರಣೆ ಕಾಯ್ದೆ ತಿದ್ದುಪಡಿ

ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಜಿ.ಎಸ್.ಮಳಗಿ ಅವರಿಗೆ ರೈತ ಸಂಘದ ಪದಾಧಿಕಾರಿಗಳು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಶನಿವಾರ ಮನವಿ ಪತ್ರ ಸಲ್ಲಿಸಿದರು.

muddebiha-tahsildars-appeal-against-land-amendment
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುದ್ದೇಬಿಹಾಳ ತಹಶೀಲ್ದಾರರಿಗೆ ಮನವಿ

By

Published : Jun 21, 2020, 1:37 AM IST

ಮುದ್ದೇಬಿಹಾಳ: ರಿಯಲ್ ಎಸ್ಟೇಟ್‌ನವರಿಗೆ ಅನುಕೂಲ ಮಾಡಿಕೊಡಲು ಸರಕಾರ ಅವರ ಏಜೆಂಟ್ ಆಗಿ ವರ್ತಿಸುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ಧನಗೌಡ ಬಿರಾದಾರ ಆರೋಪಿಸಿದರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುದ್ದೇಬಿಹಾಳ ತಹಶೀಲ್ದಾರರಿಗೆ ಮನವಿ

ರಸ್ತೆ ತಡೆ ನಡೆಸಿದ ರೈತರು:

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೈತರು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರಸ್ತೆ ತಡೆ ನಡೆಸಿದರು. ಈ ವೇಳೆ ಕೆಲವು ಬೈಕ್ ಸವಾರರು ನಿಲ್ಲದೇ ಹಾಗೆಯೇ ಮುಂದೆ ಸಾಗುತ್ತಿದ್ದಾಗ ರೈತರು ಬೈಕ್ ಸವಾರರೊಂದಿಗೆ ವಾಗ್ವಾದ ನಡೆಸಿದರು.

ಪಟ್ಟಣದಲ್ಲಿ ಭೂ ಸುಧಾರಣೆ ಕಾಯ್ದೆಯ ತಿದ್ದುಪಡಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿಯ ಬಳಿಕ ತಹಶೀಲ್ದಾರ್ ಕಚೇರಿಯಲ್ಲಿ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಿಎಂ ಯಡಿಯೂರಪ್ಪನವರ ಖುರ್ಚಿಯನ್ನು ಅಲ್ಲಾಡಿಸುವ ಸಾಮರ್ಥ್ಯ ರೈತರಿಗೆ ಇದೆ. ಕೂಡಲೇ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಅನಿವಾರ್ಯತೆ ಬಂದೊದಗುತ್ತದೆ. ಸರಕಾರ ರೈತರನ್ನು ಉಳಿಸುವ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಜಿ.ಎಸ್.ಮಳಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ABOUT THE AUTHOR

...view details