ಮುದ್ದೇಬಿಹಾಳ: ಪಟ್ಟಣದ ಹೆವನ್ ಸಿಟಿ ಬಡಾವಣೆಯಲ್ಲಿ ಕುಡಿಯುವ ನೀರು, ರಸ್ತೆ ರಿಪೇರಿ, ಚರಂಡಿ, ಬೀದಿ ದೀಪದ ವ್ಯವಸ್ಥೆ, ಕಸದ ವಿಲೇವಾರಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿಲ್ಲ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ತಹಶೀಲ್ದಾರ್, ಮುಖ್ಯಾಧಿಕಾರಿ ಹಾಗೂ ತಾಪಂ ಇಒ ಅವರಿಗೆ ಮನವಿ ಸಲ್ಲಿಸಿದರು.
ಹೆವನ್ ಸಿಟಿ ಬಡಾವಣೆ ಸದ್ಯಕ್ಕೆ ಹಡಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದ್ದು, ಸದರಿ ಬಡಾವಣೆಯಲ್ಲಿ 89 ಮನೆಗಳು ನಿರ್ಮಾಣವಾಗಿವೆ. ಆದರೆ ಇಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದರು.