ಮುದ್ದೇಬಿಹಾಳ: ತಮ್ಮ ಜೀವ ಒತ್ತೆ ಇಟ್ಟು ಜನರ ಹಾಗೂ ಊರಿನ ಆರೋಗ್ಯದ ಬಗ್ಗೆ ಕಾಳಜಿಯಿಂದ ಸೇವೆ ಸಲ್ಲಿಸುವ ಪೌರಕಾರ್ಮಿಕರನ್ನು ಗೌರವದಿಂದ ಪ್ರತಿಯೊಬ್ಬರು ಕಾಣಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ ಹೇಳಿದರು.
ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ನಿಮಿತ್ತ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಗರದಲ್ಲಿ ಕೋವಿಡ್-19 ಸಂದರ್ಭದಲ್ಲಿ ಪೌರಕಾರ್ಮಿಕರು ಕೊರೊನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಸ್ಮರಣೀಯವಾದದು ಎಂದರು. ಕಾರ್ಯಕ್ರಮ ಆರಂಭಕ್ಕೆ ಮುನ್ನ ಆರೋಗ್ಯ ಇಲಾಖೆಯಿಂದ ಪೌರಕಾರ್ಮಿಕರ ಆರೋಗ್ಯ ತಪಾಸಣೆ, ಕೋವಿಡ್-19 ಪರೀಕ್ಷೆ ನಡೆಸಲಾಯಿತು. ಇನ್ನು ದಿನಾಚರಣೆಯ ನಿಮಿತ್ತ ವಿಜೇತರಾದ ಪೌರಕಾರ್ಮಿಕರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಅಲ್ಲದೇ ಸಾಮೂಹಿಕವಾಗಿ ಪೌರಕಾರ್ಮಿಕರನ್ನು ಸನ್ಮಾನಿಸಿ ಅವರಿಗೆ ಸ್ಯಾನಿಟೈಸರ್,ಹ್ಯಾಂಡ್‌ಗ್ಲೌಸ್,ರೇನ್‌ಕೋಟ್ ವಿತರಣೆ ಮಾಡಲಾಯಿತು.