ವಿಜಯಪುರ:ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯೊಬ್ಬನಿಗೆ ಕೊರೊನಾ ಸೊಂಕು ತಗುಲಿದ್ದು, ಜಲನಗರ ಪೊಲೀಸ್ ಠಾಣೆ ಸೀಲ್ಡೌನ್ ಮಾಡಲಾಗಿದೆ.
ಇತ್ತೀಚಿಗೆ ಯುವತಿಯೊಬ್ಬಳ ವಿಚಾರವಾಗಿ ಯುವಕನೊಬ್ಬನನ್ನು ಆತನ ಜನ್ಮದ ದಿನಕ್ಕೆಂದು ರಾಷ್ಟ್ರೀಯ ಹೆದ್ದಾರಿ ಬಳಿ ಕರೆದುಕೊಂಡು ಹೋಗಿ ಬರ್ಬರವಾಗಿ ಕೊಲೆ ಮಾಡಿದ್ದ ಆರೋಪದಲ್ಲಿ ಬಂಧಿಯಾಗಿದ್ದ.
ಜಲನಗರ ಪೊಲೀಸ್ ಠಾಣೆ ಸೀಲ್ಡೌನ್ ಘಟನೆ ನಡೆದು 24 ಗಂಟೆಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಈಗ ಅದೇ ಪ್ರಕರಣದ ಇನ್ನೊಬ್ಬ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸುವ ಮುನ್ನ ಆತನ ಗಂಟಲು ದ್ರವ ಪರೀಕ್ಷೆ ನಡೆಸಿ, ಜೈಲಿನಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿದ್ದರು.
ಈಗ ಆತನ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಆರೋಪಿಯನ್ನು ಬಂಧಿಸಿದ್ದ ಜಲನಗರ ಪಿಎಸ್ಐ ಸೇರಿ 6 ಪೊಲೀಸ್ ಕಾನ್ಸ್ಟೇಬಲ್ಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಜಲನಗರ ಪೊಲೀಸ್ ಠಾಣೆ ಸೀಲ್ಡೌನ್ ಮಾಡಲಾಗಿದೆ.