ವಿಜಯಪುರ: ಹಳೇ ವೈಷ್ಯಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ: ಹಳೇ ವೈಷ್ಯಮ್ಯಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ - Vijayapura Latest Crime News
ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ತೋಟದಲ್ಲಿ ಮನೆಯೊಂದರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಳೇ ವೈಷ್ಯಮ್ಯಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ತೋಟದಲ್ಲಿ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಡೋಮನಾಳ ನಿವಾಸಿ ಶಾಂತಪ್ಪ ಈರಪ್ಪ ತೊರವಿ(65) ಕೊಲೆಯಾದ ವ್ಯಕ್ತಿ.
ಶಾಂತಪ್ಪ ತೋಟದಲ್ಲಿ ಒಬ್ಬರೇ ಇದ್ದಾಗ ಮೂವರು ದುಷ್ಕರ್ಮಿಗಳೂ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.