ವಿಜಯಪುರ:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ವಿಚಾರ ಈಗಾಗಲೇ ಸಿಬಿಐ ವಿಚಾರಣೆ ನಡೆಸುತ್ತಿದೆ. ಆ ಕುರಿತು ನಾನು ಹೆಚ್ಚಿಗೆ ಮಾತನಾಡಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಮೋದಿ, ಜೋಶಿ ಹಸ್ತಕ್ಷೇಪವಿಲ್ಲ, ಯತ್ನಾಳ್ ಪ್ರತಿಕ್ರಿಯೆ
ಯೋಗೇಶ್ ಗೌಡ ಹತ್ಯೆಯ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಬಂಧನವಾಗಿದ್ದು, ಕುಲಕರ್ಣಿ ಪರ ಸ್ವಾಮೀಜಿ ಮಾತನಾಡಿದ್ದರ ಕುರಿತು ಪ್ರತಿಕ್ರಿಯೆ ನೀಡಲ್ಲ. ಪ್ರಕರಣ ಕುರಿತು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸಿಬಿಐ ತನಿಖೆಯ ಕುರಿತು ನಮಗೆ ಅಚಲ ವಿಶ್ವಾಸವಿದೆ ಎಂದು ಶಾಸಕ ಯತ್ನಾಳ ತಿಳಿಸಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಯೋಗೇಶ್ ಗೌಡ ಹತ್ಯೆಯ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಬಂಧನವಾಗಿದ್ದು, ಕುಲಕರ್ಣಿ ಪರ ಸ್ವಾಮೀಜಿ ಮಾತನಾಡಿದ್ದರ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು. ಪ್ರಕರಣ ಕುರಿತು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸಿಬಿಐ ತನಿಖೆಯ ಕುರಿತು ನಮಗೆ ಅಚಲ ವಿಶ್ವಾಸವಿದೆ. ನಿಷ್ಪಕ್ಷಪಾತವಾಗಿ ಸಿಬಿಐ ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ದ್ವೇಷ ರಾಗ ಇರುವುದಿಲ್ಲ.
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಯಾರು ಹಸ್ತಕ್ಷೇಪ ಮಾಡಿಲ್ಲ. ಅವೆಲ್ಲವೂ ಸುಳ್ಳು ವದಂತಿ ಎಂದು ತಳ್ಳಿ ಹಾಕಿದ ಅವರು, ಸಂಪೂರ್ಣ ತನಿಖೆ ಯಾದ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.