ವಿಜಯನಗರ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ. ಯಾವುದೇ ರೀತಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ. ರಾಜ್ಯದಲ್ಲಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಅನುಮಾನವೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪುನರುಚ್ಛರಿಸಿದ್ದಾರೆ.
ಹೊಸಪೇಟೆಯಲ್ಲಿ ಇತ್ತಿಚೆಗೆ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಯಶಸ್ವಿ ಮಾಡಿರೋ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಪಿಎಸ್ಐ ನೇಮಕದಲ್ಲಿ ಅಕ್ರಮ ಪ್ರಕರಣದಲ್ಲಿ ಸರ್ಕಾರ ಇಗಾಗಲೇ ಆರೋಪಿಗಳನ್ನು ಬಂಧಿಸಿದೆ. ಎಷ್ಟೆ ದೊಡ್ಡವರಿದ್ದರು, ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡೋಲ್ಲ ಎಂದರು.