ವಿಜಯಪುರ:ಜಿಲ್ಲಾಡಳಿತದಿಂದ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಮತದಾರರ ದಿನ: ಸಕಲ ಸಿದ್ದತೆ ನಡೆಸಲು ಅಧಿಕಾರಿಗಳಿಗೆ ಡಿಸಿ ಸೂಚನೆ - ವಿಕಲಚೇತನ ನೂತನ ಮತದಾರರಿಗೆ ಎಪಿಕ್ ಕಾರ್ಡ್ ವಿತರಣೆ
ಜಿಲ್ಲಾಡಳಿತದಿಂದ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣೆ ಆಯೋಗದ ನಿರ್ದೇಶನದಂತೆ ಇದೇ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನ ಶಿಸ್ತುಬದ್ದವಾಗಿ ಆಚರಿಸಬೇಕು. ಅಂದು ಬೆಳಗ್ಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಜಾಥಾ ನಗರದ ಮಹಾತ್ಮಾ ಗಾಂಧೀಜಿ ವೃತ್ತದಿಂದ ಆರಂಭಿಸಿ ಕಂದಗಲ ಹನುಮಂತರಾಯ ರಂಗಮಂದಿರದ ವರೆಗೆ ಮತದಾನದ ಮಹತ್ವ ಕುರಿತ ಅರಿವು ಮೂಡಿಸುವಂತೆ ಸಲಹೆ ನೀಡಿದರು. ನಂತರ ಬೆಳಗ್ಗೆ 11 ಗಂಟೆಗೆ ರಂಗಮಂದಿರದಲ್ಲಿ ಶಿಸ್ತುಬದ್ಧವಾಗಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಮುಖ್ಯ ಸಮಾರಂಭ ಆಯೋಜಿಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸುವ ಜೊತೆಗೆ ನುರಿತ ಉಪನ್ಯಾಸಕರನ್ನು ಆಹ್ವಾನಿಸಬೇಕು. ಅಂದು ನೂತನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡ ಮತದಾರರು ಹಾಗೂ ವಿಕಲಚೇತನ ನೂತನ ಮತದಾರರಿಗೆ ಎಪಿಕ್ ಕಾರ್ಡ್ ವಿತರಣೆ ಹಾಗೂ ಸನ್ಮಾನಿಸುವಂತೆ ಸೂಚನೆ ನೀಡಿದರು.