ಕರ್ನಾಟಕ

karnataka

ETV Bharat / state

ಮುದ್ದೇಬಿಹಾಳ; ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ಚಾಲನೆ - new app for farmers

ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಸಲ್ಲಿಸುವ ವಿನೂತನ ಯೋಜನೆಯೊಂದನ್ನು ಜಾರಿಗೊಳಿಸಲಾಗಿದೆ.

new app for farmers
ಬೆಳೆ ಸಮೀಕ್ಷೆ

By

Published : Aug 17, 2020, 11:31 PM IST

ಮುದ್ದೇಬಿಹಾಳ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಪ್ರತಿ ಬಾರಿ ರೈತರ ಬೆಳೆ ವಿಮೆ, ಬೆಳೆ ಸಾಲ ಸೇರಿದಂತೆ ಹಲವು ಸೌಲಭ್ಯಗಳಿಗಾಗಿ ಕೈಗೊಳ್ಳುವ ಬೆಳೆ ಸಮೀಕ್ಷೆಯನ್ನು ಈ ಬಾರಿ ರೈತರಿಗೆ ವಹಿಸಿದೆ.

ಬೆಳೆ ಸಮೀಕ್ಷೆ

ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಸಲ್ಲಿಸುವ ವಿನೂತನ ಯೋಜನೆಯೊಂದನ್ನು ಜಾರಿಗೊಳಿಸಲಾಗಿದೆ.

ರೈತರ ಬೆಳೆ ಸಮೀಕ್ಷೆ : 2020-21 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆಗಸ್ಟ್ 11 ರಿಂದ ಜಿಲ್ಲೆಯಾದ್ಯಂತ ಆರಂಭಗೊಂಡಿದೆ. ಸರ್ಕಾರದ ಆದೇಶದ ಅನುಸಾರ ಈ ಬಾರಿಯ ಬೆಳೆ ಸಮೀಕ್ಷೆಯ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಳೆ ಸಮೀಕ್ಷೆಯಿಂದ ಯಾವುದಕ್ಕೆಲ್ಲ ಅನುಕೂಲ:

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳ ಗುರುತಿಸಲು, ಬೆಳೆವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗ ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಹಾಗೂ ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ನಡೆಸಲು ಬೆಳೆ ಸಮೀಕ್ಷೆ ಅನುಕೂಲವಾಗಲಿದೆ.

ಮುದ್ದೇಬಿಹಾಳ ಮತಕ್ಷೇತ್ರದ ಬೆಳೆ ವರದಿ :

2020-21 ನೇ ಸಾಲಿನಲ್ಲಿ ಮುದ್ದೇಬಿಹಾಳ ತಾಲೂಕಿನಲ್ಲಿ 54,106 ಹಾಗೂ ತಾಳಿಕೋಟೆ ತಾಲೂಕಿನಲ್ಲಿ 36,914 ರೈತರ ಜಮೀನುಗಳ ಸರ್ವೆ ಕೈಗೊಳ್ಳುವ ಗುರಿ ಹೊಂದಲಾಗಿದೆ. ಮುದ್ದೇಬಿಹಾಳ ತಾಲೂಕಿನಲ್ಲಿ 56,814 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ.

ಅರಿವು ಮೂಡಿಸಲು ಖಾಸಗಿ ನಿವಾಸಿಗಳು :

ರೈತರ ಜಮೀನಿಗೆ ತೆರಳಿ ಅವರಿಂದಲೇ ಬೆಳೆ ಸಮೀಕ್ಷೆಯನ್ನು ಮೊಬೈಲ್‌ನ ಮೂಲಕ ಆ್ಯಪ್‌ನಲ್ಲಿ ದಾಖಲಿಸುವ ಕಾರ್ಯ ಮಾಡಿಸುವ ಜವಾಬ್ದಾರಿಯನ್ನು ಖಾಸಗಿ ನಿವಾಸಿಗಳಿಗೆ ವಹಿಸಲಾಗಿದೆ. ಪ್ರತಿಯೊಬ್ಬ ಖಾಸಗಿ ನಿವಾಸಿಗೆ ಒಂದು ಜಮೀನು ಸರ್ವೆಗೆ ಕನಿಷ್ಠ 10 ರೂಪಾಯಿ ಹಾಗೂ ಒಂದಕ್ಕಿಂತ ಹೆಚ್ಚು ಬೆಳೆ ಇದ್ದರೆ 20 ರೂಪಾಯಿ ಗೌರವಧನ ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಚ್. ಯರಝರಿ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details