ವಿಜಯಪುರ: ಫೇಸ್ಬುಕ್ನಲ್ಲಿ ತನ್ನ ಫೋಟೋ ಅಪ್ಲೋಡ್ ಮಾಡಿದ್ದಾನೆಂದು ತನ್ನ ಪ್ರಿಯಕರನ ವರ್ತನೆಗೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ತಿರುವು ಪಡೆದುಕೊಂಡಿದೆ.
ನಾಪತ್ತೆಯಾಗಿದ್ದಾನೆ ಎನ್ನಲಾದ ಪ್ರಿಯಕರ ಫೇಸ್ಬುಕ್ನಲ್ಲಿ ಪ್ರತ್ಯಕ್ಷವಾಗಿದ್ದು, ತನ್ನ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯನ್ನು ಆಸ್ತಿಯ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾನೆ. ಅಷ್ಟೇ ಅಲ್ಲದೇ, ತಾನೂ ಸಹ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಆತನ ಕುಟುಂಬ ವರ್ಗದವರಲ್ಲಿ ಆತಂಕ ಸೃಷ್ಟಿಸಿದ್ದಾನೆ.