ವಿಜಯಪುರ:ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುಖ್ಯಮಂತ್ರಿಗಳ ಮಟ್ಟದಲ್ಲಿ ನಡೆದೇ ಇಲ್ಲ, ಇದೊಂದು ಸುಳ್ಳು ಸುದ್ದಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಇಲ್ಲ, ಇದು ಸುಳ್ಳು ಸುದ್ದಿ: ಸಚಿವೆ ಶಶಿಕಲಾ ಜೊಲ್ಲೆ
ಸದ್ಯಕ್ಕೆ ಸಂಪುಟ ವಿಸ್ತರಣೆಯಾಗುವುದಿಲ್ಲ ಇದೊಂದು ಸುಳ್ಳು ಸುದ್ದಿ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.
ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರದಲ್ಲಿ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ನಡೆದು ಕೆಲವರನ್ನು ಕೈಬಿಡುವ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಯಾವುದೇ ಸಚಿವರನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂದರು.
ಇದರ ಜೊತೆಗೆ ಹೊಸದಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಎಲ್ಲರಿಗೂ ಸೂಕ್ತ ಸ್ಥಾನಮಾನ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ಯಾರಿಗೂ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದರು.