ವಿಜಯಪುರ: ಭಾರತ ತಂಡದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಎಸ್ಪಿ ಹೆಚ್ ಡಿ ಆನಂದಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್ ಅವರು ಒಂದು ಮಾಲ್ನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ವಿಚಾರ ಗಮನಕ್ಕೆ ಬಂದಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಕೇಸ್ ದಾಖಲಾಗಿಲ್ಲ. ಈ ರೀತಿಯ ಸಣ್ಣ ಪುಟ್ಟ ಘಟನೆಗಳು ನಡೆಯುತ್ತಿರುತ್ತವೆ. ಆದರೆ, ಇವರು ರಾಷ್ಟ್ರೀಯ ಆಟಗಾರರು ಎಂಬ ಕಾರಣಕ್ಕೆ ಸ್ವಲ್ಪ ಸುದ್ದಿಯಾಗಿದೆ. ಗಲಾಟೆಗೆ ಸಂಬಂಧಿಸಿದಂತೆ ದೂರು ದಾಖಲಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಗಾಯಕ್ವಾಡ್ ಗಲಾಟೆ ಕುರಿತು ಪ್ರತಿಕ್ರಿಯೆ ನೀಡಿದ ಎಸ್ಪಿ ಹೆಚ್ ಡಿ ಆನಂದಕುಮಾರ್ ಇದನ್ನೂ ಓದಿ:ಕನ್ನಡತಿ, ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್ಗೆ ಗೌರವ ಡಾಕ್ಟರೇಟ್ ಪ್ರದಾನ
ಏನಿದು ಘಟನೆ?: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಕ್ರೀಡಾಪಟು ರಾಜೇಶ್ವರಿ ಗಾಯಕ್ವಾಡ್ ಅವರು ಸ್ನೇಹಿತೆಯೊಂದಿಗೆ ವಿಜಯಪುರದ ಶಾಪಿಂಗ್ ಮಾಲ್ನಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸೂಪರ್ ಮಾರ್ಕೆಟ್ ಮಾಲೀಕ ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ. ಸ್ಟೇಷನರಿ ಐಟಂ ಖರೀದಿಗೆ ಹೋಗಿದ್ದ ವೇಳೆ ಅಂಗಡಿಯವರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಾಯಕ್ವಾಡ್, ಉಮದಿ ಸೂಪರ್ ಮಾರ್ಕೆಟ್ಗೆ ಹೋಗಿದ್ದು ನಿಜ, ಆದರೆ ಯಾವುದೇ ರೀತಿಯ ಗಲಾಟೆ ನಡೆದಿಲ್ಲ ಎಂದು ತಿಳಿಸಿದ್ದಾರೆ.