ಕರ್ನಾಟಕ

karnataka

ETV Bharat / state

ವಿಜಯಪುರ: SSLC ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿಗಳಿಗೆ ಹಳೇ ಪ್ರಶ್ನೆ ಪತ್ರಿಕೆ! - sslc examination

ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವ್ಯತ್ಯಯವಾಗಿ ಹೊಸ ವಿದ್ಯಾರ್ಥಿಗಳಿಗೆ ಹಳೇ ಪ್ರಶ್ನೆ ಪತ್ರಿಕೆಗಳು ನೀಡಿದ್ದು, ಈ ಕುರಿತು ಸಂಪೂರ್ಣ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವಿಜಯಪುರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Old quation paper
ವಿಜಯಪುರ

By

Published : Jul 2, 2020, 4:06 PM IST

ವಿಜಯಪುರ:ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವ್ಯತ್ಯಯವಾಗಿ ಹೊಸ ವಿದ್ಯಾರ್ಥಿಗಳಿಗೆ ಹಳೇ ಪ್ರಶ್ನೆ ಪತ್ರಿಕೆಗಳು ನೀಡಿದ್ದು, ಈ ಕುರಿತು ಸಂಪೂರ್ಣ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿದ ತಹಶೀಲ್ದಾರ್​ ಮೋಹನ ಕುಮಾರಿ, ನಿನ್ನೆ ದರ್ಬಾರ್ ಹೈಸ್ಕೂಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಮಸ್ಯೆಯಾಗಿದೆ, ವಿಚಾರಿಸಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದಾಗ ಮೇಲ್ನೋಟಕ್ಕೆ ಹೊಸ ವಿದ್ಯಾರ್ಥಿಗಳಿಗೆ ಹಳೇ ಪ್ರಶ್ನೆ ಪತ್ರಿಕೆ ನೀಡಿರುವುದು ಕಂಡು ಬಂದಿದೆ. ಈ ಕುರಿತು ಸಂಪೂರ್ಣ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಲಾಗಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ತಹಶೀಲ್ದಾರ್​​ ಮೋಹನ ಕುಮಾರಿ

ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿದ್ದಾರೆ.‌ ಅವರಿಂದಲೂ ಮಾಹಿತಿ ಪಡೆದುಕೊಳ್ಳಬೇಕಾಗುತ್ತದೆ. ಡಿಡಿಪಿಐ ಅವರಿಗೆ ವರದಿ ಬಂದ ಬಳಿಕ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ‌ ನೀಡಲಿದ್ದಾರೆ ಎಂದು ತಹಶೀಲ್ದಾರ್ ಹೇಳಿದರು.

ABOUT THE AUTHOR

...view details