ವಿಜಯಪುರ:ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ! - ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಕ್ಷುಲ್ಲಕ ಕಾರಣಕ್ಕೆ ಶುರುವಾದ ಕಲಹ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯ
ಇಬ್ಬರ ನಡುವಿನ ಹೊಡೆದಾಟದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಸಂಗಪ್ಪ ಮೊರ್ಕೆ ಕೊಲೆಯಾದ ವ್ಯಕ್ತಿ. ಸಂಗಪ್ಪ ಮೊರ್ಕೆ ಹಾಗೂ ಗ್ರಾಮದ ಗಂಗನಗೌಡ ಬಿರಾದಾರ್ ಎಂಬುವರ ನಡುವೆ ಹೊಡೆದಾಟ ನಡೆದಿತ್ತು. ಈ ವೇಳೆ ಮಾರಕಾಸ್ತ್ರಗಳಿಂದ ಕೊಚ್ಚಿ ಸಂಗಪ್ಪನನ್ನ ಗಂಗನಗೌಡ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಗಂಗನಗೌಡ ಪರಾರಿಯಾಗಿದ್ದಾನೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.